Ad Widget .

ದಟ್ಟ ಅಡವಿಯಲ್ಲಿ ವೃದ್ಧೆಯನ್ನು ಬಿಟ್ಟು ಹೋದ ಕುಟುಂಬಸ್ಥರು!!

ಸಮಗ್ರ ನ್ಯೂಸ್: ದಟ್ಟ ಅರಣ್ಯದಲ್ಲಿ 90 ವರ್ಷದ ವೃದ್ಧೆಯೊಬ್ಬರನ್ನು ಕುಟುಂಬಸ್ಥರು ಬಿಟ್ಟು ಹೋದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ನಿತ್ರಾಣ ಸ್ಥಿತಿಯಲ್ಲಿ ವೃದ್ಧೆ ಸೋಮವಾರ ಪತ್ತೆಯಾಗಿದ್ದು, ಕುಟುಂಬದವರೇ ಅವರನ್ನು ಅರಣ್ಯದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಗ್ರಾಮದ ಜನ ತಿಳಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರುಮೇವಾಡಿ ಗ್ರಾಮದ ರೈತ ರಾಜು ಘಾಡಿ ಎನ್ನುವವರು ಸೋಮವಾರ ಕಾಡಿನ ದಾರಿಯಲ್ಲಿ ಹೊರಟಿದ್ದರು. ಆಗ ವೃದ್ಧೆ ನರಳುವುದು ಕೇಳಿಸಿತು. ಹತ್ತಿರ ಹೋಗಿ ನೋಡಿದ ಅವರು ಅಜ್ಜಿಗೆ ನೀರು ಕುಡಿಸಿ ಉಪಚರಿಸಿದರು. ತಮ್ಮ ಟ್ರ್ಯಾಕ್ಟರ್‌ನಲ್ಲಿ ಅವರನ್ನು ಹತ್ತಿರದ ಧಾಬಾಗೆ ಕರೆತಂದರು. ಧಾಬಾ ಮಾಲೀಕ ಅನಂತ ಜುಂಜವಾಡಕರ, ಉದಯ ಕೋಳೇಕರ ಅವರು ಆಂಬುಲೆನ್ಸ್‌ ಕರೆಸಿ, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದರು.

Ad Widget . Ad Widget . Ad Widget .

ಒಳರೋಗಿಯಾಗಿ ದಾಖಲಿಸಿಕೊಂಡ ವೈದ್ಯರು ತುರ್ತು ಚಿಕಿತ್ಸೆ ನೀಡಿದರು. ವೃದ್ಧೆ ನಾಲ್ಕು- ಐದು ದಿನಗಳಿಂದ ಏನನ್ನೂ ತಿಂದಿಲ್ಲ, ನೀರೂ ಕುಡಿದಿಲ್ಲ. ತೀವ್ರ ನಿತ್ರಾಣಗೊಂಡ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ತಾನು ಮುಧೋಳದವಳು ಎಂದಷ್ಟೇ ಹೇಳಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ನಾಂದ್ರೆ ತಿಳಿಸಿದರು.

ವೃದ್ಧೆಯನ್ನು ಬಿಟ್ಟುಹೋದ ಸ್ಥಳದಲ್ಲಿ ಅವರ ಬಟ್ಟೆ, ₹3,000 ಹಣ ಮಾತ್ರ ಸಿಕ್ಕಿದೆ. ಗುರುತಿನಚೀಟಿ, ವಿಳಾಸ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *