ಮಂಗಳೂರು: ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಗಾಳಿಗೆ ತೂರಿದ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ 76 ಸಾವಿರ ರೂ ದಂಡ ವಿಧಿಸಿ, 30 ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗಿದೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ಡೌನ್ ನಿಯಮ ಮುರಿದು ಸಾರ್ವಜನಿಕರು ವ್ಯಾಪಾರ ವಹಿವಾಟಿನಲ್ಲಿ ತೊಡಗಿರುವುದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು ತಂಡತಂಡವಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕವೂ ಅಂಗಡಿಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮಾಲಿಕರಿಂದ ಹಾಗೂ ಅನಗತ್ಯವಾಗಿ ಸಂಚಾರ ನಡೆಸುತ್ತಿದ್ದ ವಾಹನ ಸವಾರರಿಂದ 76 ಸಾವಿರಾರು ದಂಡ ಸಂಗ್ರಹಿಸಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ತಿಳಿಸಿದ್ದಾರೆ.