ಮಂಗಳೂರು ಹೈಪ್ರೊಪೈಲ್ ಗಾಂಜಾ ದಂಧೆ| ಬಂಧಿತ ವೈದ್ಯರು, ವಿದ್ಯಾರ್ಥಿಗಳಿಗೆ ಜಾಮೀನು

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಭಾರೀ ಸದ್ದು ಮಾಡಿದ್ದು, ಈ ಕೇಸ್‌ನಲ್ಲಿ ಭಾಗಿಯಾಗಿದ್ದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತರಿಗೆ ಜಾಮೀನು ಮಂಜೂರಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಒಟ್ಟು ನಾಲ್ವರು ವೈದ್ಯರು ಹಾಗೂ 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ (38) ಹೊರತುಪಡಿಸಿ ಉಳಿದವರಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಮಂಗಳವಾರ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *