ಪುತ್ತೂರು: ಕಾರಿಗೆ ಡಿಕ್ಕಿಯಾಗಿ ಬಂಪರ್ ನೊಳಗೆ 70 ಕಿ.ಮೀ. ಸಾಗಿದ ನಾಯಿ

ಸಮಗ್ರ ನ್ಯೂಸ್: ಕಾರಿಗೆ ನಾಯಿಯೊಂದು ಢಿಕ್ಕಿಯಾಗಿ ಬಂಪರಿನೊಳಗೆ ಸಿಲುಕಿಕೊಂಡು ಸುಮಾರು 70 ಕಿಲೋಮೀಟರ್ ಸಾಗಿ ಇಳಿದು ಹೋಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

Ad Widget ... ..

ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಪತ್ತೆಯಾಗಿರಲಿಲ್ಲ.

Ad Widget

ಇನ್ನು ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್ ನ ಗ್ರಿಲ್ ತುಂಡಾಗಿರುವುದು ಗಮನಕ್ಕೆ ಬಂದಿದ್ದು, ತುಂಡಾದ ಗ್ರಿಲ್ ಮಧ್ಯೆ 70 ಕಿಲೋಮೀಟರ್ ಹಿಂದೆ ತನಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ.

ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್ ಗೆ ತೆರಳಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರಕ್ಕೆ ತೆಗೆದಿದ್ದಾರೆ.

Leave a Comment

Your email address will not be published. Required fields are marked *