ಸಮಗ್ರ ನ್ಯೂಸ್: ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ನಡೆದಿದೆ. ಘಟನೆ ಬಗ್ಗೆ ಅನುಮಾನ ಮೂಡಿದ್ದು, ಕಾಲೇಜಿನ ಪ್ರಿನ್ಸಿಪಾಲ್ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಲಿಂಗಸುಗೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ತನ್ನ ವಿರುದ್ಧ ಆರೋಪ ಬರದಂತೆ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯನ್ನು ಕೊಂದು ಪ್ರಿನ್ಸಿಪಾಲ್ ನೇಣಿಗೆ ಹಾಕಿದ್ದಾರೆ ಎಂದು ಸಂಬಂಧಿಕರು, ಪೋಷಕರು ಆರೋಪಿಸಿದ್ದಾರೆ.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಲೆ ಮಾಡಿದ್ದಾರೆ. ಆಗಾಗ ವಿದ್ಯಾರ್ಥಿನಿಯನ್ನು ಪ್ರಿನ್ಸಿಪಾಲ್ ತಮ್ಮ ರೂಮಿಗೆ ಕರೆಸಿಕೊಳ್ಳುತ್ತಿದ್ದರು. ಅನುಮಾನ ಬರದಂತೆ ಹಾಸ್ಟೆಲ್ ನಲ್ಲಿ ನೇಣು ಹಾಕಿದ್ದಾರೆಂದು ಆರೋಪ ಮಾಡಲಾಗಿದೆ. ಸದ್ಯ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಸಂಬಂಧಿಕರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.