ಹಾಡುಹಗಲೇ ಚೂರಿಯಿಂದ ಇರಿದು ಯುವಕನ ಬರ್ಬರ ಕೊಲೆ

ಸಮಗ್ರ ನ್ಯೂಸ್: ಯುವಕನೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಪಾಂಗಾಳದಲ್ಲಿ ರವಿವಾರ ಸಂಜೆ ನಡೆದಿದೆ.

Ad Widget ... ..

ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಹತ್ಯೆಗೀಡಾದ ಯುವಕ. ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿಯೊಂದರಲ್ಲಿ ಕೃತ್ಯ ನಡೆದಿದ್ದು, ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *