ಸಮಗ್ರ ನ್ಯೂಸ್: ಲಾಡ್ಜ್ ಗಳಲ್ಲಿ ಅನೈತಿಕ & ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ ಪಿ ನೇತೃತ್ವದ ತಂಡ ಫೆ.6 ರಂದು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಲಾಡ್ಜ್ ಗಳ ಮೇಲೆ ದಾಳಿ ನಡೆಸಿದೆ.
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ರವರ, ಮಾರ್ಗದರ್ಶನ ದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ, ಪ್ರತಾಪ್ ಸಿಂಗ್ ಥೋರಾಟ್ ರವರ ನೇತೃತ್ವದಲ್ಲಿ,ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು & ಸಿಬ್ಬಂದಿಗಳ ತಂಡಗಳು ಏಕಕಾಲದಲ್ಲಿ ಉಜಿರೆಯ ಏಲ್ಲಾ ಲಾಡ್ಜ್ ಗಳ ಮೇಲೆ ದಾಳಿ ಮಾಡಿ ರಿಜಿಸ್ಟರ್ ಗಳನ್ನು ಪರಿಶೀಲಿಸಿ , ಆಧಾರ್ ಕಾರ್ಡ್, ಇತರೆ ದಾಖಲೆಗಳನ್ನು ಪರಿಶೀಲನೆ ಮಾಡಿ, ಅನೈತಿಕ & ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಜೊತೆಗೆ ಇನ್ನು ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರ ಮತ್ತು ಭಕ್ತಾಧಿಗಳ ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು,ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು, ಎಂದು ಲಾಡ್ಜ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.