ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ನಂಜನಗೂಡು ಬಳಿಯ ಸಂಚಾರ ಠಾಣೆ ಬಳಿ ಪೊಲೀಸ್ ವಾಹನ ಡಿಕ್ಕಿಯ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಮುದ್ದಳ್ಳಿ ನಿವಾಸಿ ಅಭಿ (25) ಪೊಲೀಸ್ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಯುವಕ. ನಂಜನಗೂಡು ಹೆಚ್ ಕೆಹೆಚ್ ಕಾಲೋನಿಯ ತಿರುವಿನಲ್ಲಿ ಅಪಘಾತ ನಡೆದಿದ್ದು, ಬೈಕ್ ಸವಾರ ಅಭಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಹಿಂದೆಯೂ ಈ ಸ್ಥಳದಲ್ಲಿ ಹಲವು ಅಪಘಾತಗಳು ನಡೆದಿವೆ. ದೂರು ನೀಡಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.