ಸಮಗ್ರ ನ್ಯೂಸ್: ಸುಂದರ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಎಂ.ಎಸ್.ಎಸ್ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದ ಐವರು ಯುವತಿಯರು ಸೇರಿ 7 ಮಂದಿಯನ್ನು ಬಂಧಿಸಲಾಗಿದೆ.
ಉಜಿರೆ ಚಾರ್ಮಾಡಿ ರಸ್ತೆಯಲ್ಲಿರುವ ಸುರೇಶ್ ಪೂಜಾರಿ ಎಂಬಾತ ಬಾಡಿಗೆ ಪಡೆದ ಎಮ್.ಎಸ್.ಎಸ್ ಲಾಡ್ಜ್ ಮೇಲೆ ಫೆ.7 ರಂದು ಸಂಜೆ ದಾಳಿ ವೇಳೆ ದಾಖಲೆಗಳಿಲ್ಲದೆ ರೂಂಗಳಲ್ಲಿ ಐದು ಮಂದಿ ಯುವತಿಯರನ್ನು ಮತ್ತು ಇಬ್ಬರು ಲಾಡ್ಜ್ ಸಿಬ್ಬಂದಿಯನ್ನು ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ.
ನಿನ್ನೆಯಷ್ಟೆ (ಫೆ.6)ಬಂಟ್ವಾಳ ಡಿವೈಎಸ್ ಪಿ ನೇತೃತ್ವದ ತಂಡದಿಂದ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಲ್ಲದೆ, ಪೊಲೀಸರಿಗೆ ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಇವತ್ತು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲಕರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಅನೈತಿಕ ವ್ಯವಹಾರ ಮಾಡದಂತೆ ಎಚ್ಚರಿಕೆಯನ್ನು ನೀಡಿದ್ದರು.
ಆದರೆ ಈ ಬೆನ್ನಲ್ಲೇ ಉಜಿರೆಯ ಎಂ ಎಸ್ ಎಸ್ ಲಾಡ್ಜಿನಲ್ಲಿ ಅಕ್ರಮ ವೇಶ್ಯವಾಟಿಕೆ ನಡೆಯುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಲಾಡ್ಜ್ ಗೆ ದಾಳಿ ನಡೆಸಿ 5 ಮಹಿಳೆಯರ ಸಹಿತ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.