Ad Widget .

ಮಂಗಳೂರು: ಫುಡ್ ಪಾಯ್ಸನ್ ಪ್ರಕರಣ| ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜಿಲ್ಲಾ ಆರೋಗ್ಯ ಸರ್ವೇಕ್ಷಣಾ ಅಧಿಕಾರಿ ಜಗದೀಶ್ ಅವರು ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ನಿರ್ಲಕ್ಷ್ಯತೆಯ ಕುರಿತು ದೂರು ನೀಡಿದ್ದು ಅದರಂತೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

Ad Widget . Ad Widget . Ad Widget .

ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಭಾನುವಾರವೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಭಾನುವಾರ ಬಿರಿಯಾನಿ‌ ಮತ್ತು ಘೀರೈಸ್ ಪೂರೈಕೆ ಮಾಡಲಾಗಿದ್ದು, ಸೋಮವಾರ ಮಧ್ಯಾಹ್ನ ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿನಿಯರು ವಾಂತಿ, ತಲೆಸುತ್ತುವಿಕೆಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18 , ಫಾಧರ್ ಮುಲ್ಲರ್ ನಲ್ಲಿ 42 , ಸಿಟಿ ಆಸ್ಪತ್ರೆಯಲ್ಲಿ 8, ಮಂಗಳಾ ನರ್ಸಿಂಗ್ ಹೋಂನಲ್ಲಿ ಮೂವರನ್ನು ದಾಖಲಿಸಲಾಗಿತ್ತು.

ಈ ನಡುವೆ ಕಾಲೇಜು ಆಡಳಿತ ಮಂಡಳಿ ಹತ್ತು ದಿನಗಳ ಕಾಲ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದು, ವಿದ್ಯಾರ್ಥಿಗಳು ‌ಊರಿಗೆ ತೆರಳಿದ್ದಾರೆ. ಇಲ್ಲಿ ಕಲಿಯುತ್ತಿರುವ ಹಲವು ಮಂದಿ ಕೇರಳ‌ ಮೂಲದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *