Ad Widget .

ಕುತೂಹಲ ಮೂಡಿಸಿದ‌ ಮೈಲಾರ ಗೊರವಯ್ಯನ ಕಾರ್ಣಿಕ ನುಡಿ| ಅಂಬಲಿ ಹಳಸೀತು, ಕಂಬಳಿ ಬೀಸಿತಲೇ ಎಂದ ಗೊರವಯ್ಯ| ಏನಿದರ ಒಳ ಮರ್ಮ?

ಸಮಗ್ರ ನ್ಯೂಸ್: ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ ಚರ್ಚೆ ಹುಟ್ಟು ಹಾಕಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಭಂಡಾರದ ಒಡೆಯ ದೈವವಾಣಿಯನ್ನು ಲಕ್ಷಾಂತರ ಜನರು ಆಲಿಸಿದರು‌.

Ad Widget . Ad Widget . Ad Widget .

ಭರತ ಹುಣ್ಣಿಮೆ ನಂತರ ಎರಡು ದಿನಗಳ ಬಳಿಕ 11 ದಿನಗಳ ಉಪವಾಸ ಇದ್ದು, ಗೊರವಯ್ಯ ಕಾರ್ಣಿಕ ನುಡಿಯನ್ನು ಹೇಳಿದ್ದಾರೆ. 14 ಅಡಿ ಎತ್ತರದ ಬಿಲ್ಲನ್ನೇರಿ ಗೊರವಯ್ಯ ರಾಮಪ್ಪ ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂದಾಗ ಸೇರಿದ್ದ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು.

ಈ ವರ್ಷದ ಕಾರಣಿಕ ನುಡಿಯನ್ನು ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದರು. “ಸ್ವಾಮಿಯ ನುಡಿಯಲ್ಲಿ ಮಿಶ್ರಫಲ ಅಡಗಿದೆ. ಮಳೆ, ಬೆಳೆ ಸಮೃದ್ದಿಯಾಗಿ ನಾಡು ಸುಭಿಕ್ಷೆಯಾಗಬಹುದು. ಮಳೆ ಹೆಚ್ಚಾಗಿ ಬೆಳೆಹಾನಿ ಸಂಭವಿಸುವ ಸಾಧ್ಯತೆಯೂ ಇದೆ. ಮುಂದಿನ ಚುನಾವಣೆಯಲ್ಲಿ ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವ ಸೂಚನೆ ಇದೆ” ಎಂದು ಹಿರಿಯರು ಕೃಷಿ, ರಾಜಕೀಯ, ವಾಣಿಜ್ಯ, ಸಾಮಾಜಿಕ ಕ್ಷೇತ್ರಗಳ ಮೇಲೆ ತಾಳೆ ಹಾಕಿ ವಿಶ್ಲೇಷಿಸುತ್ತಿದ್ದರು. ಸ್ವಾಮಿಯ ಉಕ್ತಿ ಶುಭದಾಯಕವಾಗಿದೆ ಎಂದು ಕೆಲವರು ಅರ್ಥೈಸಿದರು.

Leave a Comment

Your email address will not be published. Required fields are marked *