Ad Widget .

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ| ಫೆ.11 ರಂದು ಕೆಎಸ್ಆರ್‌ ಟಿಸಿ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಫೆ.11ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಹಾಗೂ ಸಚಿವರುಗಳು ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ KSRTC ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲು ಕಾರ್ಯಕ್ರಮದ ಸಂಯೋಜಕರಿಂದ ಬೇಡಿಕೆ ಬಂದಿದೆ. ಅದರಂತೆ ಪುತ್ತೂರು ವಿಭಾಗದಿಂದ ಸದರಿ ಕಾರ್ಯಕ್ರಮದ ಪ್ರಯುಕ್ತ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಆದ್ದರಿಂದ ಫೆ.11ರಂದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುತ್ತದೆ.

Ad Widget . Ad Widget . Ad Widget .

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕಾಗಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *