ಮಂಗಳೂರು ಚಿನ್ನದಂಗಡಿ ಸಿಬ್ಬಂದಿ ಕೊಲೆ ಪ್ರಕರಣ| ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆಗೊಳಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ನಗರದ ಬಲ್ಮಠ ರಸ್ತೆಯ ಜುವೆಲ್ಲರ್ ಅಂಗಡಿಯೊಂದರಲ್ಲಿ ಫೆ.3ರಂದು ಅಪರಾಹ್ನ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಪೊಲೀಸರು ಶುಕ್ರವಾರ ಬಿಡುಗಡೆಗೊಳಿಸಿದ್ದಾರೆ.

Ad Widget ... ..

ನಗರದ ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಜ್ಯುವೆಲ್ಲರಿ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (54)ರನ್ನು ಒಂಟಿಯಾಗಿದ್ದ ವೇಳೆ ಆರೋಪಿಯು ಕತ್ತು ಸೀಳಿ ಕೊಲೆಗೈದಿದ್ದ.

Ad Widget

ಊಟಕ್ಕೆ ತೆರಳಿದ್ದ ಅಂಗಡಿ ಮಾಲಕರು ಮರಳಿ ಬರುವ ವೇಳೆ 12 ಗ್ರಾಂ ಚಿನ್ನದೊಂದಿಗೆ ಆರೋಪಿ ಪರಾರಿಯಾಗಿದ್ದ. ಆರೋಪಿಯು ಚಿನ್ನ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಯೊಳಗಿದ್ದ ಸಿಬ್ಬಂದಿಯನ್ನು ಚೂರಿಯಿಂದ ತಿವಿದು ಕೊಲೆ ಮಾಡಿದ್ದ.

ಸಿಸಿಟಿವಿಗಳಲ್ಲಿ ದಾಖಲಾದ ಚಿತ್ರಣಗಳಲ್ಲಿ ಈ ವ್ಯಕ್ತಿಯ ಭಾವಚಿತ್ರವು ಪತ್ತೆಯಾಗಿದೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ -9480805320 ಮತ್ತು ಸಿಸಿಬಿ ಎಸಿಪಿ ಪಿಎ ಹೆಗಡೆ- 9945054333 ಅವರನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

Leave a Comment

Your email address will not be published. Required fields are marked *