ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ| ನಾಳೆ ಏರೋ ಇಂಡಿಯಾ-2023 ಉದ್ಘಾಟನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

Ad Widget ... ..

ಇಂದು ರಾತ್ರಿ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ತಂಗಲಿದ್ದಾರೆ. ಫೆಬ್ರವರಿ 13 ರ ಸೋಮವಾರ ಬೆಳಗ್ಗೆ 9.30 ಕ್ಕೆ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

Ad Widget

ಪ್ರಧಾನಿ ಮೋದಿ ಇಂದು ರಾಜಸ್ಥಾನದ ಪ್ರವಾಸ ಮುಗಿಸಿ ಜೈಪುರ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ರಾತ್ರಿ 7.40 ಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9.30 ಕ್ಕೆ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

Leave a Comment

Your email address will not be published. Required fields are marked *