ಸಮಗ್ರ ನ್ಯೂಸ್ : ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮೂಲತಃ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಶ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಕರುನಾಡಿಗೆ ಹೆಮ್ಮೆಯ ವಿಚಾರವಾಗಿದೆ.
ಅಬ್ದುಲ್ ನಜೀರ್ ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು. ಆಂಧ್ರ ಪ್ರದೇಶದ ಜೊತೆಯಲ್ಲಿ ಛತ್ತಿಸ್‌ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ.
ಮೂಡುಬಿದಿರೆಯ ಹೆಮ್ಮೆಯ ಅಬ್ದುಲ್ ನಜೀರ್ ನೇಮಕ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು ಅಭಿನಂದನೆ ಸಲ್ಲಿಸಿದ್ದಾರೆ. “ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಶ್ರೀ ಎಸ್. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು.
ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು” ಎಂದು ಟ್ವೀಟಾಯಿಸಿದ್ದಾರೆ .