ತೋಟದ ಬಾವಿಗೆ ಆಯ ತಪ್ಪಿ ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ತೋಟದ ಬಾವಿಗೆ ಆಯತಪ್ಪಿ ಬಿದ್ದು ಮಗು ಮೃತಪಟ್ಟ ಧಾರುಣ ಘಟನೆ ಉ.ಕನ್ನಡ ಜಿಲ್ಲೆಯ ಹೊನ್ನಾವರದಿಂದ ವರದಿಯಾಗಿದೆ.

Ad Widget ... ..

ಹೊನ್ನಾವರ ತಾಲೂಕಿನ ಕಡ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಂದೂರಿನ ನಾಗಭೂಷಣ ದಯಾನಂದ ಹೆಗಡೆ ಎನ್ನುವ ಒಂದನೆ ತರಗತಿ ವಿದ್ಯಾರ್ಥಿ ತಮ್ಮ ಮನೆಯ ತೋಟದ ಸಮೀಪ ನಾಯಿಯೊಂದಿಗೆ ಆಟ ಆಡುತ್ತಾ ತೆರಳಿ ಆಕಸ್ಮಿಕವಾಗಿ ತೆರೆದ ಬಾವಿಯಲ್ಲಿ ಬಿದ್ದಿದ್ದಾನೆ.

Ad Widget

ಮಗುವನ್ನು ಕುಟುಂಬದವರು ತೋಟದಲ್ಲಿ ಹುಡುಕಿ ಬಾವಿಯ ಕಡೆ ನೋಡಿದಾಗ ದುರಂತ ಬೆಳಕಿಗೆ ಬಂದಿದೆ. ತೆರೆದ ಬಾವಿಯಾಗಿದ್ದು, ಬಾವಿಯಲ್ಲಿ ನೀರು ಇದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳಕ್ಕಾಗಮಿಸಿದ ಹೊನ್ನಾವರ ಪಿಎಸೈ ಪ್ರವೀಣಕುಮಾರ ನೇತ್ರತ್ವದಲ್ಲಿ ಸಿಬ್ಬಂದಿಗಳು ಪರಿಶೀಲನೆ ನಡೆಸಿದ ಬಳಿಕ ಸಿಬ್ಬಂದಿ ಶಿವಾನಂದ ಚಿತ್ರಗಿ ಬಾವಿಗೆ ಇಳಿದು ಶವವನ್ನು ಮೆಲಕ್ಕೆ ಎತ್ತಿದ್ದಾರೆ. ಈ ಸಂಭದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *