ಸಮಗ್ರ ನ್ಯೂಸ್: ಏರ್ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? ಏರ್ಶೋಗೆ ಬರುವುದರಿಂದ ಬಡತನ ನಿವಾರಣೆ ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಏರ್ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚುನಾವಣೆ ನೆಪದಲ್ಲಿ ಜನರನ್ನು ದಾರಿ ತಪ್ಪಿಸೋ ಯತ್ನ ನಡೆಸಿದ್ದಾರೆ. ಇದು 14ನೇ ಆವೃತಿಯ ಏರ್ ಶೋ ಆಗಿದೆ. ಇದನ್ನು ಹಿಂದೆ ಇದನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗಕ್ಕೆ ಯಾವ ಪಕ್ಷದಿಂದ ಅನ್ಯಾಯವಾಗಿದೆ. ಮಹದಾಯಿ ನೀರಿನ ವಿಚಾರವಾಗಿ ಕಾನೂನಾತ್ಮಕ ಮತ್ತು ತಾಂತ್ರಿಕ ದೋಷ ಸರಿಪಡಿಸಿಕೊಳ್ಳಲು ಹೇಳಿದ್ದೆ. ಆದರೆ ಬಿಜೆಪಿಯವರು ಪ್ರಚಾರವಾದರೆ ಸಾಕು ಎಂದು ಹೇಳಿದರು. ಈಗಲೂ ಬಿಜೆಪಿ ಅದನ್ನೇ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.
ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಅಂತ ಹೇಳುತ್ತಾರೆ. ಯೋಜನೆಗಳ ಹೆಸರಿನಲ್ಲಿ ಹಣ ಹೊಡೆಯುವ ಕೆಲಸ ಮಾಡಿದರು. ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚೆಲ್ಲಾಟವಾಡುತ್ತಿವೆ. ನೀರಾವರಿ ಯೋಜನೆ ಹೆಸರಲ್ಲಿ ಈ ಭಾಗದ ನಾಯಕರೇ ದುಡ್ಡು ಹೊಡೆಯೋ ಕೆಲಸ ಮಾಡಿದ್ದಾರೆ ಎಂದು ಹೇಳಿದರು.