ಕಡಬ: ಬಸ್ – ಕಾರು ಡಿಕ್ಕಿ ಪ್ರಕರಣ| ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದ ಮಗು

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮಗುವೊಂದು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರ ನಡೆದಿದೆ.

Ad Widget ... ..

ಇಂದು ಮಧ್ಯಾಹ್ನ ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ.

Ad Widget

ಪರಿಣಾಮ ಕಾರಿನಲ್ಲಿದ್ದ ಮಗುವೊಂದು ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಬಸ್ ಚಾಲಕ ಸಹಿತ ಇಬ್ಬರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *