ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಬೇರೆ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು.
ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.