ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಲುವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ಪ್ರತಿ ರೈತರ ಖಾತೆಗೆ ವರ್ಷಕ್ಕೆ 15 ಸಾವಿರ ಹಣ ಜಮ, ಮನೆ ಬಾಗಿಲಿಗೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಸೇರಿದಂತೆ ವಿವಿಧ ಘೋಷಣೆಗಳನ್ನು ಘೋಷಿಸಲಾಗಿದೆ.
ರಾಯಚೂರಿನ ಅಂಬಾಮಠದಲ್ಲಿ ಕೆ ಆರ್ ಪಿಪಿಯ ಸಂಸ್ಥಾಪಕ ಜನಾರ್ಧನ ರೆಡ್ಡಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಅವರು ಬಿಡುಗಡೆ ಮಾಡಿರುವಂತ ಪ್ರಾಣಾಳಿಕೆಯಲ್ಲಿ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಇನ್ನೂ ಪ್ರತಿ ವರ್ಷ ರೈತರ ಖಾತೆಗೆ 15 ಸಾವಿರ ಹಣ ಜಮೆ ಮಾಡಲಾಗುತ್ತದೆ. ಮನೆ ಬಾಗಿಲಿಗೆ ಅಧಿಕಾರಿಗಳು ಹೋಗಿ ಜನರ ಸಮಸ್ಯೆ ಆಲಿಸಿ, ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಪ್ರಣಾಳಿಕೆಯ ಭರವಸೆಯಲ್ಲಿ ಹೇಳಿದ್ದಾರೆ.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಮಾಜಿ ಸಚಿವ ಜನಾರ್ಧನ ರೆಡ್ಡಿ, ಡಿಸೆಂಬರ್ 22ರಂದು ಗಂಗಾವತಿಯಲ್ಲಿ ತಮ್ಮ ಹೊಸ ಪಕ್ಷವನ್ನು ಘೋಷಿಸಿದ್ದರು. ಅಲ್ಲದೇ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸೋದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.