ಮಂಗಳೂರು: ಕೋವಿಡ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತಹಂತದ ಅನ್ಲಾಕ್ ಗೆ ಸಿದ್ಧತೆ ನಡೆಸುತ್ತಿದ್ದು ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸುವ ಸಾಧ್ಯತೆ ಎದ್ದು ಕಾಣುತ್ತಿದೆ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನಿರೀಕ್ಷೆಗೆ ತಕ್ಕಂತೆ ಕೋವಿಡ್ ಪಾಸಿಟಿವ್ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿದೆ. ಸದ್ಯ ಅಂತಹ ಜಿಲ್ಲೆಗಳಲ್ಲಿ ಹಂತಹಂತವಾಗಿ ನಿರ್ಬಂಧ ತೆರವು ಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇನ್ನು ದಕ್ಷಿಣ ಕನ್ನಡ ಸೇರಿದಂತೆ ಮೈಸೂರು ಶಿವಮೊಗ್ಗ ಹಾಸನ ತುಮಕೂರು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹಿಂದಿನಂತೆ ಮುಂದುವರೆಯುತ್ತಿದ್ದು, ಮರಣ ಪ್ರಮಾಣ ಕೂಡ ಅದಕ್ಕೆ ಸಾಥ್ ನೀಡುತ್ತಿದೆ.
ಆದ್ದರಿಂದ ಈ ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವು ಕಾರ್ಯ ನಡೆಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ಇನ್ನು ಸರ್ಕಾರ ಮತ್ತು ಜಿಲ್ಲಾಡಳಿತಗಳು ಯಾವ ನಿರ್ಧಾರ ಕೈಗೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.