ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಈ ನಡುವೆ ಬಿಜೆಪಿ- ಕಾಂಗ್ರೆಸ್ ನಾಯಕ ನಡುವೆ ಮಾತಿನ ವಾಕ್ಸಮರ ಉಂಟಾಗಿದೆ.
ಕಾಂಗ್ರೆಸ್ ಮೊದಲಿನಿಂದಲೂ ಟಿಪ್ಪು ಪರವಾಗಿ ಮಾತನಾಡುತ್ತಲೇ ಬಂದಿದ್ದರೆ, ಬಿಜೆಪಿ ಆತ ಒಬ್ಬ ದೇಶದ್ರೋಹಿ ಎಂದು ವಿರೋಧಿಸುತ್ತಲೇ ಬಂದಿದೆ. ಆದರೆ ಇದೀಗ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಬಳಿ ನಿಮಗೆ ಸಾವರ್ಕರ್ ಬೇಕಾ? ಟಿಪ್ಪು ಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಾವರ್ಕರ್ ಬೇಕು ಎಂಬ ಉತ್ತರ ಬಂದಿದ್ದೆ. ಹೀಗಾಗಿ ಈ ಹೇಳಿಕೆ ನೀಡಿದ್ದಾರೆ.