ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು(ಫೆ.20) ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

Ad Widget ... ..

ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.

Ad Widget

ಭಗವಾನ್‌ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕರಾಗಿಯೂ ಹೆಸರು ಮಾಡಿದ್ದಾರೆ. ದೊರೆ-ಭಗವಾನ್‌ ಖ್ಯಾತಿಯ ಜೋಡಿ ‘ಹೊಸಬೆಳಕು’, ‘ಕಸ್ತೂರಿ ನಿವಾಸ’ ಸೇರಿದಂತೆ 50ಕ್ಕೂ ಅಧಿಕ ಹಿಟ್‌ ಸಿನಿಮಾಗಳನ್ನು ನಿರ್ದೇಶಿಸಿದೆ. ಭಗವಾನ್​​​​ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *