ಪುತ್ತೂರು: ದೇಶವಿರೋಧಿ ಚಟುವಟಿಕೆಗಳ ತಾಣವಾಗಿದ್ದ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ ಜಡಿದ ಎನ್ಐಎ

ಸಮಗ್ರ ನ್ಯೂಸ್: ದೇಶವಿರೋಧಿ ಚಟುವಟಿಕೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಬಳಿಕ ರಾಷ್ಟ್ರೀಯ ತನಿಖಾ ದಳದ ಕರಾವಳಿಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಆ ಮೂಲಕ ದೇಶ ವಿರೋಧ ಕೃತ್ಯ ನಡೆಯುವ ತಾಣಗಳಿಗೆ ಎನ್‌ಐಎ ತಂಡ ದಾಳಿ ನಡೆಸಿ ಬಿಗ್ ಶಾಕ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಕಬಕ ಸಮೀಪದ ಮಿತ್ತೂರಿನಲ್ಲಿರುವ ಫ್ರೀಡಂ ಹಾಲ್ ನಲ್ಲಿ ಉಗ್ರಗಾಮಿ ಚಟುವಟಿಕೆಗಳು ನಡೆಯುತ್ತಿದ್ದವು ಎಂಬ ಅಂಶ ಬಯಲಾಗಿದ್ದು ಸ್ವತಃ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಇದೀಗ ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ ಅನ್ವಯ ಬೀಗ ಜಡಿಯಲಾಗಿದೆ.

Ad Widget ... ..

ಈ ಬಗ್ಗೆ ಅಧಿಕೃತವಾಗಿ ನೋಟಿಸ್ ಹೊರಡಿಸಿರುವ ಎನ್‌ಐಎ ಅಧಿಕಾರಿ ಷಣ್ಮುಗಂ. ಎಂ ಮಿತ್ತೂರು ಫ್ರೀಡಮ್ ಹಾಲ್ ನ ಎಲ್ಲಾ ಆಸ್ತಿಯನ್ನು ಜಪ್ತಿ ಮಾಡಲು, NIA ಅಥವಾ ಗೊತ್ತುಪಡಿಸಿದ ಪ್ರಾಧಿಕಾರದ ಪೂರ್ವಾನುಮತಿ ಹೊರತುಪಡಿಸಿ ಯಾವುದೇ ರೀತಿಯಲ್ಲಿ ಹೇಳಲಾದ ಆಸ್ತಿಯನ್ನು ವರ್ಗಾಯಿಸಲು, ಗುತ್ತಿಗೆಗೆ, ವಿಲೇವಾರಿ ಮಾಡಲು, ಅದರ ಸ್ವರೂಪವನ್ನು ಬದಲಾಯಿಸಲು ಅಥವಾ ವ್ಯವಹರಿಸಲು ನಿಷೇಧವನ್ನು ಹೇರಲಾಗಿದೆ.

Ad Widget

ಪ್ರವೀಣ್ ನೆಟ್ಟಾರು ಹತ್ಯೆ ಎನ್‌ಐಎ ವರ್ಗಾವಣೆಯಾದ ಬೆನ್ನಲ್ಲೇ ದೇಶ ವಿರೋಧ ಕೃತ್ಯ ನಡೆಸುವ ತಾಣಗಳ ಮೇಲೆ ಎನ್‌ಐಎ ದಾಳಿ ನಡೆಸಿತ್ತು. ಇದೀಗ ಆದೇಶ ಹೊರಡಿಸಲಾಗಿದ್ದು ಫ್ರೀಡಮ್ ಹಾಲ್ ನಲ್ಲಿ ನಡೆಯುತ್ತಿದ್ದ ಸತ್ಯಾಸತ್ಯತೆಗಳು ಬಯಲಾಗಿದೆ.

Leave a Comment

Your email address will not be published. Required fields are marked *