ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದ ಬಸವನಾಡಿನ ಜನತೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

Ad Widget ... ..

ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಟಕ್ಕಳಕಿ, ಹುಬನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭಾರಿ ಶಬ್ದ ಕೇಳಿ ಬಂದಿದ್ದು, ನಡುರಾತ್ರಿ ಮಲಗದೆ ಹಲವು ಗ್ರಾಮಗಳ ಜನರ ರಸ್ತೆ ಬದಿ ಕುಳಿತು ಕಾಲ ಕಳೆದಿದ್ದಾರೆ.

Ad Widget

ತಮಗೆ ಕೇಳಿ ಬಂದ ಶಬ್ದದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಭೂಕಂಪ ಸಂಭವಿಸಿದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಈ ಕುರಿತಂತೆ ಯಾವುದೇ ಸ್ಪಷ್ಟನೆ ನೀಡಿಲ್ಲ.

Leave a Comment

Your email address will not be published. Required fields are marked *