ಸಮಗ್ರ ನ್ಯೂಸ್: ಕಳೆದ 60 ವರ್ಷದಲ್ಲಿ ಇದೇ ಮೊದಲ ಬಾರಿಗೆ ತನ್ನ ಸಾಂಪ್ರದಾಯಿಕ ಲೋಗೋವನ್ನು ಬದಲಾಯಿಸುವ ಮೂಲಕ ಪ್ರಸಿದ್ಧ ಟೆಲಿಕಾಂ ಸಾಧನ ಉತ್ಪಾದಕ ಸಂಸ್ಥೆ ಹೊಸ ಕಾರ್ಯತಂತ್ರದ ಸೂಚನೆ ನೀಡಿದೆ.
ಹೊಸ ಲೋಗೋದಲ್ಲಿ ‘ನೋಕಿಯಾ’ ಪದದ ಐದು ಅಕ್ಷರಗಳು ಐದು ವಿಭಿನ್ನ ಆಕಾರದಲ್ಲಿವೆ.ಹಳೆಯ ಲೋಗೋದ ವಿಶಿಷ್ಟ ನೀಲಿ ಬಣ್ಣವನ್ನು ಬಳಕೆಯ ಅನುಗುಣವಾಗಿ ಬಣ್ಣಗಳ ಶ್ರೇಣಿಗೆ ಕೈಬಿಡಲಾಗಿದೆ.
‘ಈ ಹಿಂದೆ ಸ್ಮಾರ್ಟ್ ಫೋನ್ ಗಳಿಗೆ ಸಂಬಂಧಿಸಿದ ನಮ್ಮ ಸಂಸ್ಥೆ ಇಂದು ವ್ಯಾಪಾರ ತಂತ್ರಜ್ಞಾನದ ಸಂಸ್ಥೆಯಾಗಿದೆ. 2020ರ ಬಿಕ್ಕಟ್ಟಿನ ಬಳಿಕ ‘ಮರುಹೊಂದಿಕೆ, ವೇಗವರ್ಧನೆ ಮತ್ತು ಪ್ರಮಾಣ’ ಎಂಬ ಮೂರು ಕಾರ್ಯತಂತ್ರವನ್ನು ನಾವು ಇರಿಸಿಕೊಂಡಿದ್ದೆವು. ಇದೀಗ ಮರುಹೊಂದಿಸುವ ಹಂತ ಮುಗಿದಿದೆ’ ಎಂದು ನೋಕಿಯಾದ ಸಿಇಒ ಪೆಕ್ಕಾ ಲುಂಡ್ಮಾರ್ಕ್ ಹೇಳಿದ್ದಾರೆ.