ಸಮಗ್ರ ನ್ಯೂಸ್: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು(ಫೆ.27) ಶಿವಮೊಗ್ಗದಲ್ಲಿ ನೂತನ ಏರ್ ಪೋರ್ಟ್ ಉದ್ಘಾಟಿಸಿದ್ದಾರೆ. ನಂತರ ಸಮಾರಂಭದಲ್ಲಿ ಭಾಷಣ ಮಾಡಿದ ಪ್ರಧಾನಿ ‘ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎನ್ನುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ವಿಮಾನ ಯಾನ ಕ್ಷೇತ್ರದಲ್ಲಿ ಭಾರತ ಬಹಳಷ್ಟು ಅಭಿವೃದ್ದಿ ಹೊಂದಿದೆ. ಕರ್ನಾಟಕದಲ್ಲಿ ಅಭಿವೃದ್ದಿಯ ರಥ ಸಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಅಭಿವೃದ್ದಿಯ ಕೆಲಸ ಮಾಡುತ್ತಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಿಗೂ ಏರ್ ಪೋರ್ಟ್ ಆಗಿದೆ. ಹವಾಯಿ ಚಪ್ಪಲಿ ಹಾಕಿಕೊಂಡು ಹೋಗುವವರು ವಿಮಾನದಲ್ಲಿ ಪ್ರಯಾಣಿಸುವಂತಾಗಬೇಕು. ಶಿವಮೊಗ್ಗದ ಬಹುದಿನದ ಬೇಡಿಕೆ ಈಗ ಈಡೇರಿದೆ ಎಂದರು.
ಆಗುಂಬೆ ಸೂರ್ಯಾಸ್ತವನ್ನು ಎಂದಿಗೂ ಮರೆಯಲು ಆಗಲ್ಲ, ಇಲ್ಲಿ ಜೋಗ ಜಲಪಾತವೂ ಇದೆ. ಸಿಗಂದೂರು ಚೌಡೇಶ್ವರಿ, ಕೋಟೆ ಆಂಜನೇಯ ದೇವಸ್ಥಾನವಿದೆ. ಇಲ್ಲಿಗೆ ವಿಮಾನ ಪ್ರಯಾಣದ ಸಂಪರ್ಕ ಅವಶ್ಯಕವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಭಿವೃದ್ಧಿ ಆಗಲಿದೆ. ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣವಾದರೆ ಸಾಕಷ್ಟು ಅನುಕೂಲವಾಗುತ್ತದೆ. ಹಾವೇರಿವರೆಗೂ ಜನರಿಗೆ ಸಂಪರ್ಕ ಸಾಧ್ಯವಾಗುತ್ತದೆ.
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಲ್ಲಿಯೂ ಏರ್ಪೋರ್ಟ್ ಮಾಡಲಾಗುತ್ತಿದೆ. ಬಡವನು ಕೂಡ ವಿಮಾನಯಾನ ಮಾಡುವಂತಾಗಬೇಕು ಎಂದರು. ಶಿವಮೊಗ್ಗದಿಂದ ನಾನು ಬೆಳಗಾವಿಗೆ ಹೋಗಬೇಕಿದೆ. ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಮೊದಲು ಶಿವಮೊಗ್ಗದಲ್ಲಿ ನೂತನ ಏರ್ ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ ಬಳಿಕ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಮಾಮ್ ಕೋಸ್ ಆಡಳಿತ ಭವನ ಉದ್ಘಾಟಿಸಿದ್ದಾರೆ.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ. ಜಲಜೀವನ್ ಮಿಷನ್ ಕಾಮಗಾರಿ,ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋಗೆ ಚಾಲನೆ ಸೇರಿದಂತೆ ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ.