ಕಾಸರಗೋಡು: ರೈಲು ಡಿಕ್ಕಿ ಹೊಡೆದು ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ರೈಲು ಡಿಕ್ಕಿ ಹೊಡೆದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ಉಪ್ಪಳ ರೈಲ್ವೆ ನಿಲ್ದಾಣದ ಬಳಿ ವರದಿಯಾಗಿದೆ.

Ad Widget ... ..

ಮಂಗಲ್ಪಾಡಿಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತ ಪಟ್ಟವರು.

Ad Widget

ಸಂಜೆ ಕೆಲಸ ಮುಗಿಸಿ ನೀಲೇಶ್ವರ ದಲ್ಲಿರುವ ಮನೆಗೆ ತೆರಳಲು ಉಪ್ಪಳ ರೈಲು ನಿಲ್ದಾಣ ಸಮೀಪ ಹಳಿ ದಾಟುತ್ತಿದ್ದಾಗ ರೈಲು ಬಡಿದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಮೃತಪಟ್ಟ ಐಶ್ವರ್ಯ ನೀಲೇಶ್ವರ ದೇವನ್ ಆರ್ಟ್ಸ್ ನ ವಿಪಿನ್ ರವರ ಪತ್ನಿ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

Leave a Comment

Your email address will not be published. Required fields are marked *