ಕರಾವಳಿಗರೇ ಎಚ್ಚರ| ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿಗಾಳಿ ಬೀಸಲಿದೆ ಜೋಕೆ

ಸಮಗ್ರ ನ್ಯೂಸ್: ಬೇಸಿಗೆ ಪ್ರಾರಂಭದಲ್ಲೇ ಅತೀ ಹೆಚ್ಚು ಕರಾವಳಿಯಲ್ಲಿ ಸೆಖೆ ಹೆಚ್ಚಾಗಿದ್ದು, ಇದೀಗ ದಕ್ಷಿಣಕನ್ನಡ ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

Ad Widget ... ..

ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ.

Ad Widget

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಿಸಿಗಾಳಿಯ ವಾತಾವರಣ ಕಂಡು ಬರಲಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಎಂದು ಹವಾಮಾನ ಇಲಾಖೆಯು ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *