ಸಮಗ್ರ ನ್ಯೂಸ್; ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಗಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಆದ್ರೆ, ಈಗ ಬ್ರಿಟನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ.
ಬ್ರಿಟನ್ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯರಿಗೆ ಪ್ರಯೋಜನಕಾರಿಯಾದ ಮೋದಿ ಸರ್ಕಾರದ ಯೋಜನೆಗಳ ಕೇಳಲಾಯಿತು. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಮಹಿಳೆಯರಿಗೆ ಉಚಿತ ಸಿಲಿಂಡರ್ ನೀಡುವ ಉಜ್ವಲ ಯೋಜನೆ ಮತ್ತು ಜನರ ಬ್ಯಾಂಕ್ ಖಾತೆ ತೆರೆಯುವುದು ಉತ್ತಮ ಯೋಜನಗಳಾಗಿವೆ ಎಂದು ಹೇಳಿದರು.
ಮುಂದುವರೆದು ಮಾತನಾಡಿದ ರಾಹುಲ್ ಗಾಂಧಿ, ಅವರು ಭಾರತದ ಜನರ ಮೇಲೆ ತಮ್ಮ ಅಭಿಪ್ರಾಯಗಳನ್ನು ಹೇರುತ್ತಿದ್ದಾರೆ, ಅದನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ. ನೀವು ಕೇವಲ ಒಂದು ಕಲ್ಪನೆಯನ್ನು ಜನರ ಮೇಲೆ ಹೇರಿದರೆ, ಅದರ ಪ್ರತಿಕ್ರಿಯೆ ಖಂಡಿತವಾಗಿಯೂ ಬರುತ್ತದೆ ಎಂದು ಪಿಎಂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ತಮ್ಮ ಮತ್ತು ಇತರ ಹಲವು ವಿರೋಧ ಪಕ್ಷದ ನಾಯಕರ ಫೋನ್‌ಗಳಲ್ಲಿ ಪೆಗಾಸಸ್ ಸ್ಪೈವೇರ್ ಇದೆ, ನಿಮ್ಮ ಮಾತುಗಳು ರೆಕಾರ್ಡ್ ಆಗುತ್ತದೆ. ನೀವು ಮಾತನಾಡುವಾಗ ಜಾಗರೂಕರಾಗಿರಿ ಎಂದು ಸ್ವತಃ ಗುಪ್ತಚರ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ರಾಹುಲ್ ಗಾಂಧಿಯವರ ಉಪನ್ಯಾಸದ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.