ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ.

Ad Widget ... ..

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

Ad Widget

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಹೊಸ ಮಾರ್ಗಸೂಚಿ ಪ್ರಮುಖಾಂಶಗಳು:

  • ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ
  • ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ
  • ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ
  • ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ
  • ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ
  • ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ
  • ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ
  • ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ
  • ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ
  • ಬೆಂಗಳೂರಿನಲ್ಲಿ ಮೆಟ್ರೋ ಸಂಚಾರಕ್ಕೆ ನಿರ್ಬಂಧ
    *ಮದುವೆಗಳಲ್ಲಿ 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ
  • ಅಂತ್ಯಕ್ರಿಯೆಯಲ್ಲಿ 5 ಜನರಿಗೆ ಮಾತ್ರ ಅವಕಾಶ

Leave a Comment

Your email address will not be published. Required fields are marked *