ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು| ಎನ್ಐಎ ನಿಂದ ರಿವೀಲ್ ಆಯ್ತು‌ ಮಾಹಿತಿ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಹೊಸತೊಂದು ಮಾಹಿತಿ ರಿವೀಲ್ ಮಾಡಿದೆ. ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ.

Ad Widget ... ..

ಪ್ರವೀಣ್ ಕೊಲೆಯಾಗುವ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು ರೂಪಿಸಲಾಗಿತ್ತು.

Ad Widget

20 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ NIA

ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್​ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್​ಗೆ ಸಲ್ಲಿಸಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *