ಶಿವಮೊಗ್ಗ: ರಥಕ್ಕೆ‌ ಬೆಂಕಿ ಹಚ್ಚಿ ಪರಾರಿಯಾದ ಕಿಡಿಗೇಡಿಗಳು

ಸಮಗ್ರ‌ ನ್ಯೂಸ್: ಶಿವಮೊಗ್ಗದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮೆರೆದಿದ್ದು, ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ.

Ad Widget ... ..

ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ.

Ad Widget

ಘಟನೆ ಸಂಬಂಧ ದೇವಸ್ಥಾನದ ಅರ್ಚಕ ರಾಘವೇಂದ್ರ ದೂರು ಸಲ್ಲಿಸಿದ್ದಾರೆ. ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *