ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್

ಸಮಗ್ರ ನ್ಯೂಸ್: ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬಂದ್ ಗೆ ಕರೆ ಕೊಟ್ಟಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧರಿಸಿದೆ.

Ad Widget ... ..

ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

Ad Widget

ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬೆಳಗ್ಗೆ 9 ರಿಂದ 11 ಗಂಟೆಯ ವರೆಗೆ ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಕರೆ ನೀಡಿತ್ತು. ದ್ವಿತೀಯ ಪಿಯುಸಿ ಮಕ್ಕಳ ಪರೀಕ್ಷೆ ಹಿನ್ನೆಲೆ, ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಪರೀಕ್ಷೆಯ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *