ತಮಿಳುನಾಡು ಬಿಜೆಪಿಗೆ ಬಿಗ್ ಶಾಕ್| 13 ಮಂದಿ ನಾಯಕರು ಪಕ್ಷಕ್ಕೆ ಗುಡ್ ಬೈ| ಗಲಿಬಿಲಿಗೊಂಡ ರಾಜ್ಯಾಧ್ಯಕ್ಷ ಅಣ್ಣಾಮಲೈ

ಸಮಗ್ರ ನ್ಯೂಸ್: ತಮಿಳುನಾಡು ರಾಜ್ಯ ರಾಜಕಾರಣದಲ್ಲಿ ದಿಢೀರ್​ ಬೆಳವಣಿಗೆ ನಡೆದಿದ್ದು, ಬರೋಬ್ಬರಿ 13 ಬಿಜೆಪಿ ಮುಖಂಡರು ಪಕ್ಷ ತೊರೆದಿದ್ದಾರೆ. ಇದು ಅಲ್ಲಿನ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Ad Widget ... ..

ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ ಎಂಬುದು ಜನರಿಗೆ ಗೊತ್ತಿದೆ. ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಅಸಹಜ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

Ad Widget

ಇವರೆಲ್ಲ AIADMK ಪಕ್ಷವನ್ನು ಸೇರುತ್ತಿದ್ದಾರೆ ಎಂದು ವರದಿಯಾಗಿದೆ. ಯಾಕಂದ್ರೆ ಕಳೆದ ಮೂರು ದಿನಗಳಿಂದ ತಮಿಳುನಾಡು ಬಿಜೆಪಿಯಲ್ಲಿ ಬಿರುಗಾಳಿ ಎದ್ದಿದ್ದು, ಒಬ್ಬೊಬ್ಬರೇ ಪಕ್ಷವನ್ನು ತೊರೆಯುತ್ತಿದ್ದಾರೆ. ಇದು ಅಲ್ಲಿನ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರ ನಾಯಕತ್ವವನ್ನು ಪ್ರಶ್ನಿಸಿಸುವಂತೆ ಮಾಡಿದೆ.

Leave a Comment

Your email address will not be published. Required fields are marked *