ಸಮಗ್ರ ನ್ಯೂಸ್: ಬೇಸಿಗೆಯಲ್ಲಿ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ವಿದ್ಯುತ್ ಕೊರತೆ ಉಂಟಾದಲ್ಲಿ ಹೊರ ರಾಜ್ಯಗಳಿಂದ ಖರೀದಿಸುವ ಕುರಿತು ಚಿಂತನೆ ಮಾಡಲಾಗುವುದು. ಅಲ್ಲದೆ ರೈತರ ಪಂಪ್ ಸೆಟ್ ಗಳಿಗೆ ನಿರಂತರ ಏಳು ತಾಸು 3 ಫೇಸ್ ವಿದ್ಯುತ್ ಪೂರೈಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ ವಿವಿಧೆಡೆ ಕೆಐಎಡಿಬಿಯು ಭೂಸ್ವಾಧೀನ ಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು ಕಳೆದುಕೊಂಡವರಿಗೆ ಅಲ್ಲಿ ಸ್ಥಾಪನೆಯಾಗುವ ಉದ್ಯಮಗಳಲ್ಲಿ ಉದ್ಯೋಗ ಕೊಡಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.