ಸಮಗ್ರ ನ್ಯೂಸ್: ಬಿಎಂಟಿಸಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದ್ದು, ಬಸ್ನಲ್ಲೇ ನಿದ್ದೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ನಲ್ಲಿ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಬೆಳಗ್ಗೆ ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಲ್ಲಿ ನಿರ್ವಾಹಕ ಮುತ್ತಯ್ಯಸ್ವಾಮಿ ಮೃತಪಟ್ಟಿದ್ದರೆ, ಅದೃಷ್ಟವಶಾತ್ ಶೌಚಕ್ಕೆ ಹೋಗಿದ್ದ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿರ್ವಾಹಕ ಮುತ್ತಯ್ಯಸ್ವಾಮಿ ಮೂಲತಃ ಗದಗ ಜಿಲ್ಲೆಯ ಹಾಲೂರಿನವರು. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

















