ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹೆಚ್3ಎನ್2 ವೈರಸ್ಗೆ ಮೊದಲ ಬಲಿಯಾಗಿದೆ. H3N2 ವೈರಸ್ನಿಂದ ಬಳಲುತ್ತಿದ್ದ ಹಾಸನ(Hassan) ಮೂಲದ ವೃದ್ಧ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಖಚಿತಪಡಿಸಿದ್ದಾರೆ.
ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುರು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊಮಾರ್ಬಿಡಿಟಿ ಮತ್ತು 60 ವರ್ಷ ಮೇಲ್ಪಟ್ಟವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ.
ಜ್ಚರ, ಗಂಟಲುನೋವು, ಕೆಮ್ಮಿನಿಂದ ಬಳಲುತ್ತಿದ್ದ ಹಾಸನ ಜಿಲ್ಲೆ ಆಲೂರು ಮೂಲದ ವೃದ್ದ ಮಾರ್ಚ್ 1 ರಂದು ಆಲೂರಿನಲ್ಲಿ ಮೃತಪಟ್ಟಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲ ಹಳ್ಳಿಯಲ್ಲಿ ಅರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಅನಾರೋಗ್ಯ ಪೀಡಿತ ಜನರನ್ನು ವೈದ್ಯರ ತಂಡ ತಪಾಸಣೆ ಮಾಡುತ್ತಿದೆ. ಎಲ್ಲರ ಅರೋಗ್ಯ ತಪಾಸಣೆ ನಡೆಸಿ ಪರೀಕ್ಷೆಗಾಗಿ ಗಂಟಲು ದ್ರವವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ.