ಹವಾಮಾನ ಸಮಾಚಾರ| ಇಂದೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿಲಿನ ತಾಪ ಮುಂದುವರೆದಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಉಷ್ಣ ಅಲೆ ಭೀತಿ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Ad Widget ... ..

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ನಿರಂತರವಾಗಿ ರಾಜ್ಯದ ಅತಿಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಹೀಗಾಗಿ ಕಳೆದ ಗುರುವಾರ ಮತ್ತು ಶುಕ್ರವಾರ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿತ್ತು. ಈ ಎಚ್ಚರಿಕೆಯನ್ನು ಶನಿವಾರಕ್ಕೂ ಮುಂದುವರಿಸಲಾಗಿದೆ.

Ad Widget

ನಿನ್ನೆ ಹೊನ್ನಾವರದಲ್ಲಿ 37.6, ಕಾರವಾರದಲ್ಲಿ 36.3 ಹಾಗೂ ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

Leave a Comment

Your email address will not be published. Required fields are marked *