ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯ ಇಳಿಕೆ ಕಾಣುತ್ತಿರುವ ಬೆನ್ನಲ್ಲೇ ಕಪ್ಪು ಶಿಲೀಂದ್ರ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲಿ ಇದುವರೆಗೆ 2,100 ಕ್ಕೂ ಅಧಿಕ ಜನ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದಾರೆ.
ದೇಶವ್ಯಾಪಿ ಈವರೆಗೆ 31,220 ಕ್ಕೂ ಹೆಚ್ಚು ಪ್ರಕರಣಗಳು ಮತ್ತು 2,110ಕ್ಕೂ ಹೆಚ್ಚು ಸಾವು ಸಂಭವಿಸಿದ ಬಗ್ಗೆ ವರದಿಯಾಗಿದೆ. ಬ್ಲಾಕ್ ಫಂಗಸ್ ಸೋಂಕು ಏರಿಕೆಗೆ ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆಗೆ ಆಂಫೊಟೆರಿಸಿನ್-ಬಿ ಔಷಧದ ತೀವ್ರ ಕೊರತೆಯೇ ಕಾರಣ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಹೆಚ್ಚು ಹಾನಿ ಸಂಭವಿಸಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಗುಜರಾತ್ ಎರಡನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ಮೂರನೇ ಸ್ಥಾನದಲ್ಲಿದೆ. ಕರ್ನಾಟಕ ಸೇರಿದಂತೆ ಹೆಚ್ಚಿನ ರಾಜ್ಯಗಳಲ್ಲಿ ಬ್ಲಾಕ್ ಫಂಗಸ್ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಸೋಂಕಿನ ಪ್ರಮಾಣ ಅಷ್ಟೊಂದು ಏರಿಕೆ ಕಂಡು ಬಂದಿಲ್ಲ.