ಸಮಗ್ರ ನ್ಯೂಸ್: ಮುಸ್ಲಿಮರ ಮನೆ, ಮಸೀದಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಂಗಳವಾರ ಹಮ್ಮಿಕೊಂಡಿದ್ದ ಮೋಟಾರ್ ಬೈಕ್ ರ್ಯಾಲಿಯ ವೇಳೆ ಸುಮಾರು 150 ಜನರು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಸೀದಿಯ ಸಮೀಪಕ್ಕೆ ತೆರಳಿ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದರು.
ಈ ಕುರಿತು ಮಾಹಿತಿ ನೀಡಿದ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ್, ಸುಮಾರು 8–10 ಮನೆಗಳು ಹಾಗೂ ಎರಡು ವಾಹನಗಳಿಗೆ ಹಾನಿಯಾಗಿದೆ. ತನಿಖೆಗಾಗಿ 15 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ, ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿಸಿದರು.