ಸಮಗ್ರ ನ್ಯೂಸ್: ಪ್ರತಿ ವರ್ಷ ಫೆಬ್ರವರಿಯಲ್ಲಿ ಚಳಿ ಅನುಭವಿಸುತ್ತಿದ್ದ ಜನ ಈ ಬಾರಿ ಕಳೆದೊಂದು ತಿಂಗಳಿನಿಂದ ಬಿಸಿಲಿನ ಜಳವನ್ನು ಅನುಭವಿಸುತ್ತಿದ್ದಾರೆ. ಈ ನಡುವೆ ತೀವ್ರ ಬಿಸಿಗಾಳಿ ಮತ್ತು ಬಿಸಿಗಾಳಿಯ ಬಗ್ಗೆ ಕೇಂದ್ರವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.
ಈ ಬಾರಿ ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆಯೂ ಎಚ್ಚರಿಸಿದೆ.
ಮಂಗಳವಾರ, ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಅವರು ದೇಶದಲ್ಲಿ ಬೇಸಿಗೆ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದರು. ಇದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಸಿಲಿನ ತಾಪವನ್ನು ಎದುರಿಸಲು ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಕೇಳಿಕೊಂಡರು ಎನ್ನಲಾಗಿದೆ.
2023ರಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಾಗುವ ಸಾಧ್ಯತೆ ಇದೆ ಎಂದು ಗೌಬಾ ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಅದಕ್ಕೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಈಗಿನಿಂದಲೇ ಸಮರ್ಪಕವಾಗಿ ಸಿದ್ಧರಾಗಬೇಕಿದೆ ಅಂತ ಹೇಳಿದ್ದಾರೆ ಎನ್ನಲಾಗಿದೆ.