Ad Widget .

KPTCL ಮತ್ತು ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿ ಸುದ್ದಿ| ಶೇ.20ರಷ್ಟು ವೇತನ ಹೆಚ್ಚಿಸಿ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಮಾಡಿದೆ.

Ad Widget . Ad Widget .

ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

Ad Widget . Ad Widget .

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಈ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *