ಗದಗ: ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಗದಗ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ.
ಪಾರ್ವತಿ ಬಾವಿ (24) ಮೃತ ಯುವತಿ. ಯುವತಿ ಆತ್ಮಹತ್ಯೆಗೆ ಲವ್ ಫೆಲ್ಯೂರ್ (Love Failure) ಕಾರಣ ಎಂದು ಹೇಳಲಾಗುತ್ತಿದೆ.
ರೈಲ್ವೆ ಕೀಪರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಇತ್ತೀಚೆಗೆ ಪ್ರೇಮಿಗಳಿಬ್ಬರು ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರಿಯತಮನ ಜೊತೆ ಜಗಳವಾಗಿದ್ದರಿಂದ ನೊಂದ ಯುವತಿ ಮನೆಯಲ್ಲಿಯೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಆಕೆ ಡೆತ್ ನೋಟ್ ಬರೆದಿಟ್ಟಿದ್ದು, ಪೊಲೀಸರು ಬಹಿರಂಗಪಡಿಸಿಲ್ಲ.