ಸಮಗ್ರ ನ್ಯೂಸ್ : ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ ಗೆ ಶರಣಾದ ಘಟನೆ ಬುಧವಾರ ರಾತ್ರಿ ನಡೆದಿದೆ.
ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆಗೆ ಶರಣಾದವರು. ಇವರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಸೇವಾ ಸಿಂದು ಕೇಂದ್ರ ನಡೆಸುತ್ತಿದ್ದ, ಅವಿವಾಹಿತ ಸಂದೀಪ್ ಶೆಟ್ಟಿ ಇನ್ಶೂರೆನ್ಸ್ ಏಜೇಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ವ್ಯಾವಹಾರಿಕ ಸಮಸ್ಯೆ ಗಳು ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.