ಸಮಗ್ರ ನ್ಯೂಸ್: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ಬುಧವಾರ ಸಂಜೆ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಯುವತಿಯರು ಹಾಗೂ ರೂಂ ಬಾಯ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿದ್ದರು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಇದೇ ವೇಳೆ ಇಪ್ಪತ್ತೆರಡರಿಂದ ಇಪ್ಪತ್ತಮೂರು ವಯಸ್ಸಿನ ಇಬ್ಬರು ಯುವತಿಯರು ಹಾಗೂ ಓರ್ವ ರೂಂ ಬಾಯ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಇಬ್ಬರು ಏಜೆಂಟರು ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯ ಇಬ್ಬರು ಬಂಧಿತರು ಸುಳ್ಯ ಪೊಲೀಸರ ವಶದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಪುತ್ತೂರು, ಕಡಬ ಮೂಲದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆಗೆ ಯತ್ನ ನಡೆಸಲಾಗುತ್ತಿತ್ತು ಎನ್ನಲಾಗುತ್ತಿದೆ.