Mother committed to suicide| ಎದೆಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವು| ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದಲ್ಲಿ ನಡೆದಿದೆ.ಈ ಘಟನೆ ಇಡುಕ್ಕಿ ಜಿಲ್ಲೆಯ ಉಪ್ಪುತರ ಸಮೀಪ ನಡೆದಿದೆ. ಮೃತರನ್ನು ಲಿಜಾ ಹಾಗೂ ಬೆನ್ ಟಾಮ್ ಎಂದು ಗುರುತಿಸಲಾಗಿದೆ.

Ad Widget ... ..

ಆತ್ಮಹತ್ಯೆಮಾಡಿಕೊಂಡಿದ್ದುಯಾಕೆ?: ಎರಡು ದಿನಗಳ ಹಿಂದೆಯಷ್ಟೇ ಎದೆ ಹಾಲು ಕುಡಿಯುತ್ತಿದ್ದ ಮಗು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇದರಿಂದ ತಾಯಿ ತೀವ್ರವಾಗಿ ನೊಂದಿದ್ದರು. ಇದೇ ಬೇಜಾರಲ್ಲಿದ್ದ ತಾಯಿ ಬೆಳಗ್ಗೆ 6 ಗಂಟೆ ಸುಮಾರಿಗೆ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವಾಗಲೇ ಲಿಜಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

Ad Widget

ಬೆಳಗ್ಗೆ ಮನೆಯವರೆಲ್ಲರೂ ಚರ್ಚ್‌ಗೆ ತೆರಳಿದ ಬಳಿಕ ಲಿಜಾ ಬಾವಿಗೆ ಹಾರಿದ್ದಾರೆ. ಇತ್ತ ಪ್ರಾರ್ಥನೆ ಮುಗಿಸಿ ಬರುತ್ತಿದ್ದಂತೆಯೇ ಮನೆಯಲ್ಲಿ ಲಿಜಾ ಹಾಗೂ ಆಕೆಯ ಮಗ ಇಲ್ಲದಿರುವುದನ್ನು ಗಮನಿಸಿದ ಕುಟುಂಬಸ್ಥರಿಗೆ ಶಾಕ್ ಆಗಿದೆ. ಕೂಡಲೇ ಎಲ್ಲರೂ ಎಲ್ಲಾ ಕಡೆ ಹುಟುಕಾಟ ನಡೆಸಿದರು. ಈ ವೇಳೆ ಲಿಜಾ ಹಾಗೂ ಆಕೆಯ ಮಗನ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಬಾವಿಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Leave a Comment

Your email address will not be published. Required fields are marked *