ಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತ ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ.

Ad Widget ... ..

ಸುಳ್ಯ ಪೊಲೀಸ್‌ ಠಾಣಾ ಉಪನಿರೀಕ್ಷಕ ದಿಲೀಪ್‌ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸುಳ್ಯದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ.ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ.

Ad Widget

ಸುಳ್ಯ ನಗರದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತುಗಳ ಜಾಲ ಕಾರ್ಯಾಚರಣೆ ನಡೆಸುತ್ತಿದೆ ಎಂದು ಈ ಹಿಂದೆಯೇ ‘ಸಮಗ್ರ ಸಮಾಚಾರ’ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಅದಾದ ಬಳಿಕ ಕೊಂಚ ಕಡಿಮೆಯಾಗಿದ್ದ ಈ ಜಾಲದ ಕೈಚಳಕ ಮತ್ತೆ ಮುಂದುವರೆದಿದ್ದು, ಇದರ ಹಿಂದಿನ ವ್ಯಕ್ತಿಗಳ ಬಗ್ಗೆ ತನಿಖೆ ನಡೆಯಬೇಕಿದೆ.

ಇದನ್ನೂ ಓದಿ..

Leave a Comment

Your email address will not be published. Required fields are marked *