Ad Widget .

ಚಂದ್ರ ದರ್ಶನ ಹಿನ್ನಲೆ| ಕರಾವಳಿಯಲ್ಲಿ ನಾಳೆಯಿಂದ (ಮಾ.23) ಪವಿತ್ರ ರಂಝಾನ್ ಉಪವಾಸ ಆರಂಭ

ಸಮಗ್ರ ನ್ಯೂಸ್: ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆಯಿಂದ ಕರಾವಳಿಯಾದ್ಯಂತ ಉಪವಾಸ ವ್ರತ ಆರಂಭವಾಗಲಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝೀ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಚಂದ್ರ ದರ್ಶನವಾಗಿರುವುದರಿಂದ ಕರಾವಳಿಯಲ್ಲಿ ರಂಜಾನ್ ಮಾಸದ ಉಪವಾಸ ವ್ರತ ನಾಳೆಯಿಂದ ಆರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.

Ad Widget . Ad Widget .

ಇಸ್ಲಾಮಿಕ್ ಕ್ಯಾಲೆಂಡರ್‌ನ ಒಂಬತ್ತನೇ ತಿಂಗಳಲ್ಲಿ ರಂಜಾನ್ ಆಚರಿಸಲಾಗುತ್ತದೆ. ಪವಿತ್ರ ಮಾಸ ರಂಜಾನ್ ಅನ್ನು ಪ್ರಪಂಚದಾದ್ಯಂತ ಮುಸ್ಲಿಂ ಸಮುದಾಯದವರು ಆಚರಿಸುತ್ತಾರೆ. ಈ ಸಮಯದಲ್ಲಿ 30 ದಿನಗಳ ಕಾಲ ಪ್ರತಿದಿನ ಮುಂಜಾನೆಯಿಂದ ಸಂಜೆಯವರೆಗೆ ಉಪವಾಸ ಅನುಸರಿಸುತ್ತಾರೆ. ಸೂರ್ಯಾಸ್ತದ ಸಮಯದಲ್ಲಿ ಇಫ್ತಾರ್ ಭೋಜನದೊಂದಿಗೆ ಉಪವಾಸ ಮುಗಿಯುತ್ತದೆ.

Leave a Comment

Your email address will not be published. Required fields are marked *