ಸಮಗ್ರ ನ್ಯೂಸ್: ಕೆಎಸ್‌ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಎಪಿಎಂಸಿ ಬಳಿ ಅಪಘಾತ ಸಂಭವಿಸಿದೆ.
ಮೃತರನ್ನು ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದ್ದು, ಬೈಕ್ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ.
ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.